ಕಲಬುರಗಿ: ಕಲಬುರಗಿ ಸೆಂಟ್ರಲ್ ಜೈಲ್ ಅಧೀಕ್ಷಕಿ ಅನಿತಾ ಅವರಿಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಇಬ್ಬರು ಮಹಿಳೆಯರು ಸೇರಿ 9 ಕೈದಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ಜೈಲ್ ಅಧೀಕ್ಷಕಿ ಅನಿತಾ ಅವರ ಕಾರು ಸ್ಫೋಟಿಸುವುದಾಗಿ ಕೈದಿಗಳು ಬೆದರಿಕೆ ಹಾಕಿದ್ದರು. ಮುಸ್ತಪ್ಫಾ,ನಾಸೀರ್, ಬಚ್ಚನ್, ಅಲ್ತಾಫ್, ದೇವರಾಜ್, ನಾಗರಾಜ್, ಶ್ರೀಕಾಂತ್ ಸೇರಿದಂತೆ 9 ಕೈದಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಜೈಲಿನಲ್ಲಿ ಬೀದಿ, ಸಿಗರೇಟ್, ಗುಟ್ಕಾ ಬಂದ್ ಮಡಿದ್ದಕ್ಕೆ ಅನಿತಾ ವಿರುದ್ಧ ಕೈದಿಗಳು ಪ್ರತಿಭಟನೆ ನಡೆಸಿದ್ದರು. ಬಳಿಕ ಕೈದಿಯೊಬ್ಬನಿಂದ ಆಡಿಯೋ ಮೂಲಕ ಬೆದರಿಕೆ ಸಂದೇಶ ಕಳುಹಿಸಲಾಗಿತ್ತು. ಜೈಲಿನಲ್ಲಿದ್ದ ಕೈದಿಗಳೇ ಇದನ್ನು ಮಾಡಿದ್ದಾರೆ ಎಂಬ ಶಂಕೆ ಹಿನ್ನಲೆಯಲ್ಲಿ ತನಿಖೆ ನಡೆಸಲಾಗಿದ್ದು, ಇದೀಗ 9 ಕೈದಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.