
ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ನಡೆದ ಗ್ಯಾಂಗ್ ವಾರ್ ಗೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇರೆಗೆ ಇಬ್ಬರು ಜೈಲರ್ ಗಳನ್ನು ಅಮಾನತು ಮಾಡಲಾಗಿದೆ.
ಜೈಲರ್ ಗಳಾದ ಶೆಹನಾಜ್ ನಿಗಿವಾನ್ ಮತ್ತು ಪರಮಾನಂದ ಹರವಾಳ ಅವರನ್ನು ಸೇವೆಯಿಂದ ಅಮಾನತು ಮಾಡಿ ಕಾರಾಗೃಹ ಇಲಾಖೆ ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಆದೇಶ ಹೊರಡಿಸಿದ್ದಾರೆ.
ಅಕ್ಟೋಬರ್ 9ರಂದು ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಗ್ಯಾಂಗ್ ವಾರ್ ನಡೆದಿತ್ತು. ಕಲಬುರಗಿ ಜೈಲಿನಲ್ಲಿ ಅನೇಕ ಹಗರಣಗಳು ಹೊರಬರುತ್ತಿದ್ದು ಎಸ್ಪಿ ಯಶೋದಾ ನೇತೃತ್ವದಲ್ಲಿ ತನಿಖೆ ಮುಂದುವರೆಸಲಾಗಿದೆ. ಅಧಿಕಾರಿಗಳಿಗೆ ಬ್ಲಾಕ್ಮೇಲ್ ಕುರಿತ ಆಡಿಯೋ, ಗ್ಯಾಂಗ್ ವಾರ್, ರಾಜಾತಿಥ್ಯ ಪ್ರಕರಣಗಳ ಕುರಿತಾಗಿ ತನಿಖೆ ನಡೆಸಲಾಗಿದೆ.