ಕಲಬುರಗಿ: ಕಲಬುರಗಿ ಸರ್ಕಾರಿ ಐಟಿಐ ಕಚೇರಿ ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಆಗಸ್ಟ್ 6 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕೆಳಕಂಡ ಕಂಪನಿಗಳಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕಲಬುರಗಿಯ ಫ್ಲೀಪ್ಕಾರ್ಟ್ದಲ್ಲಿ ಡೆಲಿವರಿ ಎಕ್ಸಿಕ್ಯೂಟಿವ್ 30 ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ ವಯೋಮಿತಿ 20ರಿಂದ 45 ವರ್ಷದೊಳಗಿರಬೇಕು. ಡ್ರೈವಿಂಗ ಲೈಸನ್ಸ್ ಮತ್ತು ಬೈಕ್ ಹೊಂದಿರುವ ಪುರುಷ ಅಭ್ಯರ್ಥಿಗಳು ಮಾತ್ರ ನೇರ ಸಂರ್ದಶನಕ್ಕೆ ಹಾಜರಾಗಬೇಕು.
ಹೈದ್ರಾಬಾದ್ನ ಡಿ-ಮಾರ್ಟ್ದಲ್ಲಿ ಕ್ಯಾಷಿಯರ್ 100 ಹುದ್ದೆಗಳಿಗೆ ಅಭ್ಯರ್ಥಿಗಳು ಪಿ.ಯು.ಸಿ. ವಿದ್ಯಾರ್ಹತೆ ಹಾಗೂ ಪ್ಯಾಕರ್ 100 ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 25 ವರ್ಷದೊಳಗಿನ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ (ರೆಸ್ಯೂಮ್) ಬಯೋಡಾಟಾ ವಿದ್ಯಾರ್ಹತೆಯ ಪ್ರಮಾಣ ಪತ್ರ ಹಾಗೂ ಆಧಾರ ಕಾರ್ಡ್ಗಳೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.