ಕಲಬುರಗಿ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮುಂದುವರೆದಿದೆ, ಬಳ್ಳಾರಿ, ಬೆಳಗಾವಿ, ರಾಯಚೂರು ಬಳಿಕ ಇದೀಗ ಕಲಬುರಗಿಯಲ್ಲಿ ಬಾಣಂತಿಯೋರ್ವರು ಸಾವನ್ನಪ್ಪಿದ್ದಾರೆ.
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಟಕಿ ಗ್ರಾಮದ ನಿವಾಸಿ ಭಾಗ್ಯಶ್ರೀ (22) ಮೃತ ಬಾಣಂತಿ. ಇಂದು ಮಗುವಿಗೆ ಜನ್ಮ ನೀಡಿದ ಬಳಿಕ ಕೊನೆಯುಸಿರೆಳೆದಿದ್ದಾರೆ.
ನಿನ್ನೆಯಷ್ಟೇ ಹೆರಿಗೆಗಾಗಿ ಅಫಜಲಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಿಗ್ಗೆ 8 ಗಂಟೆಗೆ ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕ ಭಾಗ್ಯಶ್ರೀ ಆರೋಗ್ಯದಲ್ಲಿ ಏರ್ಪೇರಾಗಿದೆ. ಹೆರಿಗೆ ಬಳಿಕ ರಕ್ತದೊತ್ತಡ ಕಡಿಮೆಯಾಗಿತ್ತು ಎಂದು ವೈದ್ಯರು ತಿಳಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಬಾಣಂತಿ ಮೃತಪಟ್ತಿದ್ದಾರೆ.
ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಸಾವಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.