
ಕಲಬುರಗಿ: ಕಲಬುರ್ಗಿಯ ಕೇಂದ್ರ ಬಸ್ ನಿಲ್ದಾಣ ಸಮೀಪ ಶಾಂತಿನಗರದಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಶಾಹಿನ್ ಬಾನು(35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದ ಮೃತ ಶಾಹಿನ್ ಬಾನು ಶೇಖ್ ಹೈದರ್ ಎಂಬುವರ ಎರಡನೇ ಪತ್ನಿಯಾಗಿದ್ದಾರೆ. ಯಾರು ಕೊಲೆ ಮಾಡಿದ್ದಾರೆ. ಕಾರಣವೇನು ಎನ್ನುವುದು ಗೊತ್ತಾಗಿಲ್ಲ.
ಮಾರಕಾಸ್ತ್ರದಿಂದ ಹೊಡೆದು ಶಾಹಿನ್ ಬಾನು ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಮಾಹಿತಿ ತಿಳಿದು ಡಿಸಿಪಿ ಕನಿಕಾ ಸಿಕ್ರಿವಾಲ್, ಅಶೋಕ ನಗರ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.