alex Certify ಜ. 19ಕ್ಕೆ ಕಲಬುರಗಿಗೆ ಪ್ರಧಾನಿ ಮೋದಿ: ಐತಿಹಾಸಿಕ 30 ಸಾವಿರ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆಗೆ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜ. 19ಕ್ಕೆ ಕಲಬುರಗಿಗೆ ಪ್ರಧಾನಿ ಮೋದಿ: ಐತಿಹಾಸಿಕ 30 ಸಾವಿರ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆಗೆ ಚಾಲನೆ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಐತಿಹಾಸಿಕ 30 ಸಾವಿರ ಸೇರಿದಂತೆ ವಿವಿಧ ಜಿಲ್ಲೆಗಳ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ಜನವರಿ 19ಕ್ಕೆ ಕಲಬುರಗಿಗೆ ಆಗಮಿಸಲಿದ್ದಾರೆ.

ಸೇಡಂ ತಾಲೂಕಿನ ಮಳಖೇಡ ಬಳಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಂತೆ ಸುಮಾರು 60 ಎಕರೆ ವಿಶಾಲ ಪ್ರದೇಶದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಪ್ರಧಾನಮಂತ್ರಿಗಳು ಅಂದು ಕಲಬುರಗಿ ಸೇರಿದಂತೆ ಯಾದಗಿರಿ, ಬೀದರ, ರಾಯಚೂರು ಹಾಗೂ ವಿಜಯಪುರ ಜಿಲ್ಲೆಗಳ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಮತ್ತು ಜಿಲ್ಲೆಯ ಜಲ್ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳಿಗೆ ಚಾಲನೆ ನೀಡುವರು.

ಈ ಹಿನ್ನೆಲೆಯಲ್ಲಿ ಮಂಗಳವಾರ ಡಿ.ಸಿ. ಯಶವಂತ ವಿ. ಗುರುಕರ್ ಅವರು ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿಯಾಗಿ ಸಭೆ ನಡೆಸಿದರು.

ಕಾರ್ಯಕ್ರಮ ಸುಗಮ ನಿರ್ವಹಣೆ ಮತು ಯಶಸ್ಸಿಗೆ ವಿವಿಧ 10 ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಅಧಿಕಾರಿಗಳಿಗೆ ನೀಡಲಾಗುವ ಜವಾಬ್ದಾರಿಯನ್ನು ಚಾಚುತಪ್ಪದೆ ಸಮರ್ಪಕವಾಗಿ ನಿರ್ವಹಿಸಬೇಕು. ವೇದಿಕೆ ನಿರ್ಮಾಣ, ಹೆಲಿಪ್ಯಾಡ್ ನಿರ್ಮಾಣ, ಪಾರ್ಕಿಂಗ್ ವ್ಯವಸ್ಥೆ, ಸುಗಮ ಸಂಚಾರ, ಸಾರ್ವಜನಿಕರ ಮತ್ತು ಗಣ್ಯರ ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ, ಭದ್ರತೆ ಹೀಗೆ ಎಲ್ಲವು ಅಚ್ಚುಕಟ್ಟಾಗಿರಬೇಕು. ಮುನ್ನೆಚ್ಚರಿಕೆಯಾಗಿ ಕಾರ್ಯಕ್ರಮ ಸ್ಥಳದಲ್ಲಿ ಅಂಬುಲೆನ್ಸ್, ಅಗ್ನಿಶಾಮಕ ವಾಹನ ತೈನಾತಿಸಬೇಕು. ಬೇರೆ ಜಿಲ್ಲೆಗಳಿಂದ ಫಲಾನುಭವಿಗಳನ್ನು ಕರೆತೆರುವ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕು. ಯಾವುದೇ ಲೋಪಕ್ಕೆ ಇಲ್ಲಿ ಅವಕಾಶವಿಲ್ಲ. ಸಣ್ಣ-ಪುಟ್ಟ ಏನೇ ಸಮಸ್ಯೆ ಇದ್ದರು ತಮ್ಮ ಗಮನಕ್ಕೆ ತರಬೇಕು ಎಂದು ಅಧಿಕಾರಿಗಳಿಗೆ ಡಿಸಿ ಖಡಕ್ ಸೂಚನೆ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...