ಬೆಂಗಳೂರು: ಕಲಬುರಗಿ ಜಿಲ್ಲೆಯಲ್ಲಿ ನಾಳೆಯಿಂದ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನಾಳೆ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಯಶವಂತ ಗುರುಕಾರ್ ಅವರು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಕಲಬುರ್ಗಿ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕೊಡಗು ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ನಾಳೆಯೂ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಬ್ಬರ ಮುಂದುವರೆದಿದೆ. ಅದೇ ರೀತಿ ಪಶ್ಚಿಮಘಟ್ಟ, ಮಲೆನಾಡು ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗಿದೆ.