alex Certify BREAKING: ಕಲಬುರಗಿಯಲ್ಲಿ ದಾರುಣ ಘಟನೆ, ಶಾಲಾ ವಾಹನ ಹರಿದು 2 ವರ್ಷದ ಮಗು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಲಬುರಗಿಯಲ್ಲಿ ದಾರುಣ ಘಟನೆ, ಶಾಲಾ ವಾಹನ ಹರಿದು 2 ವರ್ಷದ ಮಗು ಸಾವು

ಕಲಬುರಗಿ: ಶಾಲಾ ವಾಹನ ಹರಿದು ಮನೆ ಮುಂದೆ ಆಟವಾಡುತ್ತಿದ್ದ ಮಗು ಸಾವನ್ನಪ್ಪಿದೆ. ಕಲಬುರಗಿಯ ಸಂಗಮೇಶ್ವರ ಕಾಲೋನಿಯಲ್ಲಿ ಘಟನೆ ನಡೆದಿದೆ.

ಆಕ್ರೋಶಗೊಂಡ ಜನ ಶಾಲಾ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದು, ಗಾಜುಗಳು ಪುಡಿಪುಡಿಯಾಗಿವೆ. ಸಂಜೆ ಶಾಲೆಯಿಂದ ಮಕ್ಕಳನ್ನು ಮನೆಗೆ ಬಿಡಲು ಬಂದಾಗ ಘಟನೆ ನಡೆದಿದೆ. ಎರಡು ವರ್ಷದ ಪುಟ್ಟ ಕಂದ ಮನೋಜ್ ಮೃತಪಟ್ಟ ಮಗು ಎಂದು ಹೇಳಲಾಗಿದೆ. ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣವೆನ್ನಲಾಗಿದ್ದು, ಅಪಘಾತದ ನಂತರ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಾಹನ ಜಪ್ತಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...