
ಕಲಬುರಗಿ: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಯುವತಿ ಕೊಚ್ಚಿ ಹೋಗಿದ್ದಾರೆ. ದಾನೇಶ್ವರಿ(18) ನೀರಲ್ಲಿ ಕೊಚ್ಚಿ ಹೋದ ಯುವತಿ.
ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ಲಾಡಮೊಗಳಿ ಸಮೀಪ ಘಟನೆ ನಡೆದಿದೆ. ತಾಯಿಯೊಂದಿಗೆ ಬಟ್ಟೆ ತೊಳೆಯಲು ಹಳ್ಳಕ್ಕೆ ಹೋಗಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಹಳ್ಳದಲ್ಲಿ ಕೊಚ್ಚಿ ಹೋದ ಯುವತಿ ದಾನೇಶ್ವರಿಗಾಗಿ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಶೋಧಕಾರ್ಯ ಕೈಗೊಂಡಿದ್ದಾರೆ.