alex Certify ಕಲಬುರಗಿಯಲ್ಲಿ ಟಂಟಂಗೆ ಲಾರಿ ಡಿಕ್ಕಿಯಾಗಿ ಘೋರ ದುರಂತ : 3 ತಿಂಗಳ ಮಗು ಸೇರಿ ಒಂದೇ ಕುಟುಂಬದ 6 ಜನರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲಬುರಗಿಯಲ್ಲಿ ಟಂಟಂಗೆ ಲಾರಿ ಡಿಕ್ಕಿಯಾಗಿ ಘೋರ ದುರಂತ : 3 ತಿಂಗಳ ಮಗು ಸೇರಿ ಒಂದೇ ಕುಟುಂಬದ 6 ಜನರು ಸ್ಥಳದಲ್ಲೇ ದುರ್ಮರಣ

ಕಲಬುರಗಿ :ಕಲಬುರಗಿ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟಂಟಂ ಹಾಗೂ ಟ್ಯಾಂಕರ್ ಮಧ್ಯೆ ಡಿಕ್ಕಿಯಾಗಿ ಮೂರು ತಿಂಗಳ ಮಗು ಸೇರಿ ಒಂದೇ ಕುಟುಂಬದ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ  ಚಿತ್ತಾಪುರ ತಾಲೂಕಿನ ಹಲಕರ್ಟಿ ಸಮೀಪ ರಾಷ್ಟ್ರೀಯ ಹೆದ್ದಾರಿ ಬಳಿ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಜ್ಜಿನ್ ಬೇಗಂ (28), ಬೀಬಿ ಫಾತಿಮಾ (12), ಅಬೂಬಕ್ಕರ್ (4), ಬೀಬಿ ಮರಿಯಮ್ ( 3 ತಿಂಗಳ ಮಗು), ಹಮ್ಮದ್ ಪಾಷಾ (20), ಆಟೋ ಚಾಲಕ ಬಾಬಾ (35) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತಪಟ್ಟವರು ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮಕ್ಕೆ ಸೇರಿದವರಾಗಿದ್ದು, ಆಧಾರ್ ತಿದ್ದುಪಡಿಗಾಗಿ ಚಿತ್ತಾಪುರಕ್ಕೆ ಹೋಗಿ ಗ್ರಾಮಕ್ಕೆ ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...