
ಕಲಬುರಗಿ: ವಿದ್ಯುತ್ ತಂತಿ ತಗುಲಿ 6 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗೊಲ್ಲಾಳಪ್ಪ ನಾಗಾವಿ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ವಿದ್ಯುತ್ ತಂತಿ ಯಿಂದಾಗಿ ಬೆಂಕಿ ಸಂಭವಿಸಿದ್ದು, ಕಬ್ಬಿನ ಗೆದ್ದೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರೈತನ ಕಬ್ಬಿನ ಬೆಳೆ ಸಂಪೂರ್ಣ ಸುಟ್ಟು ಹೋಗಿದೆ ಎಂಬ ಆರೋಪ ಕೇಳಿಬಂದಿದೆ. ಯಡ್ರಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.