
ಕಲಬುರಗಿ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಕಲಾವತಿ(35) ಸಿಡಿಲು ಬಡಿದು ಸಾವನ್ನಪ್ಪಿದ ಮಹಿಳೆ ಎಂದು ಹೇಳಲಾಗಿದೆ.
ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಸಿದನೂರು ಗ್ರಾಮದ ಬಳಿ ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಕಲಾವತಿ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಸವಿತಾ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ತಹಶೀಲ್ದಾರ್ ಸಂಜೀವ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೇವೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.