alex Certify ಸಿಡಿಲು ಬಡಿದು ಮಹಿಳೆ ಸಾವು, ಮತ್ತೊಬ್ಬರು ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಡಿಲು ಬಡಿದು ಮಹಿಳೆ ಸಾವು, ಮತ್ತೊಬ್ಬರು ಗಂಭೀರ

ಕಲಬುರಗಿ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಕಲಾವತಿ(35) ಸಿಡಿಲು ಬಡಿದು ಸಾವನ್ನಪ್ಪಿದ ಮಹಿಳೆ ಎಂದು ಹೇಳಲಾಗಿದೆ.

ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಸಿದನೂರು ಗ್ರಾಮದ ಬಳಿ ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಕಲಾವತಿ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಸವಿತಾ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ತಹಶೀಲ್ದಾರ್ ಸಂಜೀವ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೇವೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...