ಕಲಬುರಗಿ: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇತ್ತೀಚೆಗೆ ಬಾಂಬ್ ಬೆದರಿಕೆ ಹಾಕಲಾದ ಬೆನ್ನಲ್ಲೇ ಇದೀಗ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ಏರ್ ಪೋರ್ಟ್ ಸಿಬ್ಬಂದಿಗಳು, ಪ್ರಯಾಣಿಕರು ಆತಂಕಕ್ಕೀಡಾಗಿದ್ದಾರೆ.
ಅನಾಮಧೇಯ ವ್ಯಕ್ತಿಯೊಬ್ಬ ಇ-ಮೇಲ್ ಕಳುಹಿಸಿದ್ದು, ಏರ್ ಪೋರ್ಟ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, ಪೊಲೀಸರು ಸ್ಥಳಕ್ಕೆ ದೌಡಾಯಿಸಿ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ್ದಾರೆ.
ಪ್ರತಿಯೊಬ್ಬ ಪ್ರಯಾಣಿಕರ ಬ್ಯಾಗ್ ಗಳನ್ನು ತಪಾಸಣೆ ನಡೆಸಲಾಗಿದ್ದು, ವಿಮಾನ ನಿಲ್ದಾಣದಲ್ಲಿ ಕಟೆಚ್ಚರ ವಹಿಸಲಾಗಿದೆ.