ಕಲಬುರ್ಗಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಬಾದ್ ಪಟ್ಟಣದ ಸಣ್ಣೂರ ಗ್ರಾಮದಲ್ಲಿ ನಡೆದಿದೆ.
29 ವರ್ಷದ ರಾಜು ಮೃತ ದುರ್ದೈವಿ. ಬಂಕೂರ ಗ್ರಾಮದ ನಿವಾಸಿಯಾಗಿದ್ದರು. ಪಲ್ಸರ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಡಿಕ್ಕಿಹೊಡೆದಿದೆ. ಅಪಘಾತದ ವೇಳೆ ಸ್ಥಳದಲ್ಲೇ ರಾಜು ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಶಹಬಾದ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.