ಕಲಬುರ್ಗಿ: ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಫ್ಯಾಕ್ಟರಿ ಹೊತ್ತಿ ಉರಿದ ಘಟನೆ ಕಲಬುರ್ಗಿ ನಗರದ ಕೈಲಾಸ ನಗರದಲ್ಲಿ ನಡೆದಿದೆ.
ಅಮವಾಸ್ಯೆ ಹಿನ್ನೆಲೆಯಲ್ಲಿ ಇಂದು ಫ್ಯಾಕ್ಟರಿ ಬಂದ್ ಮಾಡಲಾಗಿತ್ತು. ಆದರೆ ಮಧ್ಯಾಹ್ನ 2:30ರ ಸುಮಾರಿಗೆ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಹೊತ್ತಲ್ಲಿ ಫ್ಯಾಕ್ಟರಿ ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದಿದೆ.
ಚಂದ್ರಶೇಖರ್ ಸರಸಂಬಿ ಎಂಬುವವರಿಗೆ ಸೇರಿದ ಫ್ಯಾಕ್ಟರಿ ಇದಾಗಿದ್ದು, ಲಕ್ಷಾಂತರ ಮೌಲ್ಯದ ಅಗರಬತ್ತಿ ಸುಟ್ಟು ಭಸ್ಮವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಆರ್.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.