ಕಲಬುರ್ಗಿ: ಕೃಷಿ ಪರಿಕರಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಸಂಪರ್ಕ ಕೇಂದ್ರದ ಅಧಿಕಾರಿಯನ್ನು ಅಮಾನತು ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಯಡ್ರಾಮಿಯಲ್ಲಿ ನಡೆದಿದೆ.
ಯಡ್ರಾಮಿ ತಾಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿ ಅಮಾನತುಗೊಂಡವರು. ಕಲಬುರ್ಗಿ ಜಂಟಿ ಕೃಷಿ ನಿರ್ದೇಶಕರ ಆದೇಶ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.
ಫೆ.5ರಂದು ಟ್ರ್ಯಾಕ್ಟರ್ ನಲ್ಲಿ 100 ಎರೆಹುಳು ಗೊಬ್ಬರದ ಚೀಲವನ್ನು, 30 ಪಿವಿಸಿ ಪೈಪ್ ಗಳನ್ನು ಅಕ್ರಮವಾಗಿ ಸಾಗಾಟ ಮಾಡಲಾಗಿತ್ತು. ಈ ವೇಳೆ ಗ್ರಾಮದ ಜನರು ಟ್ರ್ಯಾಕ್ಟರ್ ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದರು. ಅಕ್ರಮದಲ್ಲಿ ರೈತ ಸಂಪರ್ಕ ಕೇಂದ್ರದ ಅಧಿಕಾರಿಯೇ ಭಾಗಿಯಾಗಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ.