ಕಲಬುರ್ಗಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಪ್ರಮುಖವಾಗಿ ಉತ್ತರ ಕರ್ನಾಟಕ ಭಾಗದ ಬಹುತೇಕ ಕಡೆಗಳಲ್ಲಿ ಧಾರಾಕಾರ ಮಳೆಯಾಗಿದೆ.
ಬಿರುಗಾಳಿ, ಮಳೆ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ. ಸಿಡಿಲು ಬಡಿದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ನರೋಣ ಗ್ರಾಮದಲ್ಲಿ ನಡೆದಿದೆ.
10 ವರ್ಷದ ಬಾಲಕ ಮಹೇಶ್ ಮೃತ ದುರ್ದೈವಿ. ಎತ್ತಿನಗಾಡಿಯಲ್ಲಿ ಜಮೀನಿನಿಂದ ಮನೆಗೆ ವಾಪಾಸ್ ಆಗುತ್ತಿದ್ದ. ಈ ವೇಳೆ ಏಕಾಏಕಿ ಸಿಡಿಲು ಬಡಿದಿದ್ದು, ಬಾಲಕ ಸಾವನ್ನಪ್ಪಿದ್ದಾನೆ.
ಇನ್ನು ಕಲಬುರ್ಗಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ರಸ್ತೆಯ ಮೇಲೆ ನೀರು ನದಿಯಂತೆ ಹರಿಯುತ್ತಿದೆ. ಇನ್ನು ಕೆಲವೆಡೆ ಹಲವು ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.