
ಕಲಬುರ್ಗಿ: ಕಲಬುರ್ಗಿಯ ಸಪ್ತಗಿರಿ ಹೋಟೆಲ್ ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ 10 ಜನರು ಗಾಯಗೊಂಡಿದ್ದರು, ಗಾಯಾಳುಗಳಲ್ಲಿ ಓರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಮಲ್ಲಿಕಾರ್ಜುನ (40) ಮೃತ ವ್ಯಕ್ತಿ. ಕಲಬುರ್ಗಿಯ ರೋಜಾ ಬಿ ಬಡಾವಣೆಯ ನಿವಾಸಿ. ಮಲ್ಲಿಕಾರ್ಜುನ ಅವರನ್ನು ಮಹಾರಾಷ್ಟ್ರದ ಮೀರಜ್ ಆಸ್ಪತ್ರೆಗೆದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಐವರನ್ನು ಮೀರಜ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅವರಲ್ಲಿ ಓರ್ವ ಮೃತಪಟ್ಟಿದ್ದಾರೆ. ಉಳಿದವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.