alex Certify ಹೆಂಡತಿಯನ್ನು ಕೊಂದು ಪೊಲೀಸ್ ಠಾಣೆಗೆ ಬಂದು ಶರಣಾದ ಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಂಡತಿಯನ್ನು ಕೊಂದು ಪೊಲೀಸ್ ಠಾಣೆಗೆ ಬಂದು ಶರಣಾದ ಪತಿ

ಕಲಬುರ್ಗಿ: ಪತ್ನಿಯನ್ನು ಬರ್ಬರವಾಗಿ ಕೊಲೆಗೈದ ಪತಿ ಮಹಾಶಯನೊಬ್ಬ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಅಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಮಾರುತಿ ಈಳಿಗೇರ್ ಪತ್ನಿಯನ್ನು ಕೊಂದ ಆರೋಪಿ. ಕಾಶಮ್ಮ ಮೃತ ಮಹಿಳೆ. ಮಾರುತಿ ಹಾಗೂ ಕಾಶಮ್ಮ ದಂಪತಿಗೆ ಮೂರು ಮಕ್ಕಳಿದ್ದು, ಮಗಳು ಮದುವೆಯಾಗಿ ಗಂಡನ ಮನೆಯಲ್ಲಿದ್ದಾಳೆ. ಇಬ್ಬರು ಗಂಡುಮಕ್ಕಳು ತಂದೆಯ ಉಪಟಳದಿಂದ ಬೇಸತ್ತು ಮನೆ ಬಿಟ್ಟು ಬೇರೆಡೆ ಜೀವನ ಸಾಗಿಸುತ್ತಿದ್ದರು. ಈ ಮಧ್ಯೆ ಮಾರುತಿ ಈಳಿಗೇರ್ ಪತ್ನಿಯನ್ನೇ ಬರ್ಬರವಾಗಿ ಕೊಲೆಗೈದಿದ್ದಾನೆ.

ಕೃತ್ಯದ ಬಳಿಕ ರಟಕಲ್ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...