ಕಲಬುರ್ಗಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ 17ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿಯಲ್ಲಿ ನಡೆದಿದೆ.
ವಸತಿ ಶಾಲೆಯಲ್ಲಿ ಬೆಳಿಗ್ಗೆ ಉಪಹಾರಸೇವಿಸಿದ ಬಳಿಕ 17ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥರಾಗಿದ್ದಾರೆ. ತಕ್ಷಣ ವಿದ್ಯಾರ್ಥಿನಿಯರನ್ನು ಜೇವರ್ಗಿ ಸರ್ಕಾರಿ ಅಸ್ಪತ್ರೆಗೆ ದಾಖಲಿಸಲಾಗಿದೆ.
ಫುಡ್ ಪಾಯಿಸನ್ ನಿಂದ ಅಸ್ವಸ್ಥರಾಗಿರುವ ಶಂಕೆ ವ್ಯಕ್ತವಾಗಿದೆ. ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.