
ಕಲಬುರ್ಗಿ: ಡಿಜೆ ಸಾಂಗ್ ವಿಚಾರವಾಗಿ ನಡೆದ ಗಲಾಟೆ ಕೋಮು ಸಂಘರ್ಷಕ್ಕೆ ತಿರುಗಿದ್ದು, ಘಟನೆಯಲ್ಲಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.
ಡಿಜೆ ಸಾಂಗ್ ಗೆ ಡಾನ್ಸ್ ಮಾಡಿದ ವಿಚಾರವಾಗಿ ಎರಡು ಕೋಮಿನ ನಡುವೆ ಗಲಾಟೆ ನಡೆದಿದೆ. ರಾಮಮಂದಿರ ಕುರಿತ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಇನ್ನೊಂದು ಕೋಮಿನ ಗುಂಪು ಆಕ್ಷೇಪ ವ್ಯಕ್ತಪಡಿಸಿದೆ ಎನ್ನಲಾಗಿದೆ. ಇದೇ ವಿಚಾರವಾಗಿ ಗಲಾಟೆ ನಡೆದಿದ್ದು, ಭೀಮಾಶಂಕರ್ ಎಂಬಾತನ ಮೇಲೆ ಅನ್ಯಕೋಮಿನ ಗುಂಪು ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.
ಗುಲಬುರ್ಗಾ ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗಾಯಾಳು ಭೀಮಾಶಂಕರ್ ನನ್ನು ಆಸ್ಪತ್ರೆಗೆ ದಾಖಲಿಇಸಲಾಗಿದೆ. ನಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ಗಾಯಾಳು ವ್ಯಕ್ತಿಯ ತಾಯಿ ದೂರಿದ್ದಾರೆ.