
ಕಲಬುರ್ಗಿ: ಕಲಬುರ್ಗಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಸೇತುವೆ, ರಸ್ತೆಗಳು ಮುಳುಗಡೆಯಾಗಿವೆ. ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ನಡುವೆ ಸೇಡಂ ನಲ್ಲಿ ಪೊಲೀಸ್ ಠಾಣೆಗೂ ಮಳೆ ನೀರು ನುಗ್ಗಿದ್ದು, ಪೊಲೀಸ್ ಠಾಣೆ ಜಲಾವೃತಗೊಂಡಿದೆ. ದಾಖಲೆಗಳನ್ನು ರಕ್ಷಿಸಲು ಪೊಲೀಸ್ ಸಿಬ್ಬಂದಿ ಪರದಾಟ ನಡೆಸಿದ್ದಾರೆ.
ಮಳೆ ನೀರು ಹರಿದು ಹೋಗಲು ವ್ಯವಸ್ಥೆ ಇಲ್ಲದ ಕಾರಣ ಪೊಲೀಸ್ ಠಾಣೆಗೆ ನೀರು ನುಗ್ಗಿದ್ದು, ಠಾಣೆಯಲ್ಲಿ ತುಂಬಿರುವ ನೀರು ಹೊರಹಾಕಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಇನ್ನು ಸೇಡಂ ತಾಲೂಕಿನ ತೋಟನಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಮೈದಾನ ಜಲಾವೃತಗೊಂಡಿದ್ದು, ಶಾಲೆಗೂ ನೀರು ನುಗ್ಗಿ, ಅವಾಂತರ ಸೃಷ್ಟಿಯಾಗಿದೆ.