alex Certify ನಾಳೆ ಬಿಡುಗಡೆಯಾಗಲಿದೆ ‘ಕಾಲಾಪತ್ಥರ್‌’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಬಿಡುಗಡೆಯಾಗಲಿದೆ ‘ಕಾಲಾಪತ್ಥರ್‌’

ವಿಕ್ಕಿ ವರುಣ್ ಮತ್ತು ಧನ್ಯ ರಾಮ್ ಕುಮಾರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಕಾಲಾಪತ್ಥರ್‌’ ಚಿತ್ರ ನಾಳೆ ರಾಜ್ಯಾದ್ಯಂತ ತೆರೆ ಕಾಣಲಿದೆ. ಈ ಸಿನಿಮಾದ ಎಲ್ಲಾ ಹಾಡುಗಳು ಯೂಟ್ಯೂಬ್ ನಲ್ಲಿ ಸೂಪರ್ ಡೂಪರ್ ಹಿಟ್ ಆಗಿದ್ದು, ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಇತ್ತೀಚಿಗಷ್ಟೇ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್  ಟ್ರೈಲರ್ ರಿಲೀಸ್ ಮಾಡುವ ಮೂಲಕ ಚಿತ್ರ ತಂಡಕ್ಕೆ ಶುಭ  ಹಾರೈಸಿದ್ದರು.

ಈ ಚಿತ್ರವನ್ನು ವಿಕ್ಕಿ ವರುಣ್ ಅವರೇ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿದ್ದು, ಧನ್ಯ ರಾಮ್ ಕುಮಾರ್, ನಾಗಾಭರಣ, ಅಚ್ಯುತ್ ಕುಮಾರ್, ಸಂಪತ್, ರಾಜೇಶ್ ನಟರಂಗ, ಗಲ್ಲಿ ನಟ, ಬಸು ಹಿರೇಮಠ, ಕಾಂತರಾಜ್ ಕಡ್ಡಿಪುಡಿ, ಉಳಿದ  ತಾರಾಂಗಣದಲ್ಲಿದ್ದಾರೆ. ಭುವನ್ ಮೂವೀಸ್ ಬ್ಯಾನರ್ ನಲ್ಲಿ ಸುರೇಶ್ – ನಾಗರಾಜು ನಿರ್ಮಾಣ ಮಾಡಿದ್ದು, ಅನೂಪ್ ಸೀಳಿನ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ದೀಪು ಎಸ್ ಕುಮಾರ್ ಸಂಕಲನ, ಸಂದೀಪ್ ಕುಮಾರ್ ಛಾಯಾಗ್ರಾಹಣ, ಹಾಗೂ ವಿಕ್ರಮ್ ಮೋರ್ ಮತ್ತು ಮಾಸ್ ಮಾದ ಅವರ ಸಾಹಸ ನಿರ್ದೇಶನವಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...