
ಕಾರವಾರ: ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಪಿಲ್ಲರ್ ಏಕಾಏಕಿ ಕುಸಿದು ಬಿದ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು, ಪಿಲ್ಲರ್ ಕುಸಿತಗೊಂಡಿದೆ. ತಡರಾತ್ರಿ ಈ ಘಟನೆ ನಡೆದಿದ್ದು, ಸದ್ಯ ಯಾವುದೇ ಅನಾಹುತ ಸಂಭವಿಸಿಲ್ಲ.
ಕಳೆದ ವರ್ಷ ಸೇತುವೆ ಕುಸಿತದ ಘಟನೆ ನಡೆದಿತ್ತು. ಇದೀಗ ಸೇತುವ ಪಿಲ್ಲರ್ ಕುಸಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.