alex Certify BIG NEWS: ಮಾಜಿ ಶಾಸಕ, ಜೆಡಿಎಸ್ ಮುಖಂಡನ ಕಾರು ಭೀಕರ ಅಪಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಶಾಸಕ, ಜೆಡಿಎಸ್ ಮುಖಂಡನ ಕಾರು ಭೀಕರ ಅಪಘಾತ

ಬೆಳಗಾವಿ: ಮಾಜಿ ಶಾಸಕ, ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣವರ ಕಾರು ಅಪಘಾತಕ್ಕೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಬಳಿ ನಡೆದಿದೆ.

ವಿಜಯಪುರದತ್ತ ಸಾಗುತ್ತಿದ್ದ ಲಾರಿ ಟೈರ್ ಬ್ಲಾಸ್ಟ್ ಆಗಿ ಜೆಡಿಎಸ್ ಮುಖಂಡ ಮಗೆಣ್ಣವರ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಟೈರ್ ಬಿದ್ದಿದೆ. ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿ ಬಿದ್ದಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಕಲ್ಲಪ್ಪ ಮಗೆಣ್ಣವರ್ ಸೇರಿದಂತೆ ನಾಲ್ವರಿಗೆ ಗಾಯಗಳಾಗಿವೆ. ಮಗೆಣ್ಣವರ್ ವಿಜಯಪುರದಿಂದ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ತಮ್ಮ ಮನೆಗೆ ತೆರಳುತ್ತಿದ್ದರುಎನ್ನಲಾಗಿದೆ. ಈ ವೇಳೆ ಕಾರು ಅಪಘಾತ ಸಂಭವಿಸಿದೆ.

ಜೆಡಿಎಸ್ ಮುಖಂಡ ಮಗೆಣ್ಣವರ್ ಹಾಗೂ ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...