
ಚೆನ್ನೈ: ತಮಿಳುನಾಡಿನ ಕಲ್ಲುಕುರುಚಿಯಲ್ಲಿ ಕಳ್ಳಭಟ್ಟಿ ಸಾರಾಯಿ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ.
ಅಕ್ರಮ ಮದ್ಯ ಸೇವಿಸಿ ಈ ದುರಂತ ಸಂಭವಿಸಿದ್ದು, 100 ಜನರು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ 15ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ. 10 ಜನರು ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಕಲ್ಲುಕುರುಚಿಯಲ್ಲಿ ಕಳ್ಳಭಟ್ಟಿ ಸಾರಾಯಿ ಸೇವಿಸಿ ಸುಮಾರು 200ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದರು. ಇದೀಗ ಅವರಲ್ಲಿ 55 ಜನರು ಸಾವನ್ನಪ್ಪಿದ್ದಾರೆ. 200 ಲೀಟರ್ ಕಳ್ಳಭಟ್ಟಿ ಸಾರಾಯಿ ವಶಕ್ಕೆ ಪಡೆಯಲಾಗಿದ್ದು, ಅದರಲ್ಲಿ ಮಾರಣಾಂತಿಕ ಮೆಥನಾಲ್ ಇದೆ ಎಂಬುದು ಪರೀಕ್ಷೆ ವೇಳೆ ಪತ್ತೆಯಾಗಿದೆ.