ಬೆಂಗಳೂರು: 10 ದಿನಗಳ ಒಳಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ರಚಿಸಲಾಗುವುದು. ಕಾಯಂ ಕಾರ್ಯದರ್ಶಿ ನೇಮಕ ಮಾಡುವ ಜೊತೆಗೆ, 20 ಸಾವಿರ ನೇರ ನೇಮಕಾತಿ ಹುದ್ದೆ ಭರ್ತಿಗೆ ಒಪ್ಪಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ
ವಿಧಾನಸಭೆಯಲ್ಲಿ ನಿಯಮ 69ರ ಅಡಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆಗೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಬೊಮ್ಮಾಯಿ, ಮಾರ್ಚ್ ಒಳಗೆ 2000 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ
ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹಣಕಾಸು ಇಲಾಖೆ ನಿರ್ಬಂಧ ತೆರವುಗೊಳಿಸಿ ಆಡಳಿತಾತ್ಮಕ ದೃಷ್ಟಿಯಿಂದ ಇಂಜಿನಿಯರ್ ಹುದ್ದೆಗಳ ಭರ್ತಿ ಮಾಡಲಾಗುತ್ತದೆ. 20,000 ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ಒಪ್ಪಿಗೆ ನೀಡಲಾಗುವುದು ಎಂದು ಹೇಳಿದರು.
ಐಟಿ ಪಾರ್ಕ್, ಟೆಕ್ಸ್ಟೈಲ್ ಪಾರ್ಕ್ ಪುನಾರಂಭಕ್ಕೆ ಸೂಚಿಸಲಾಗಿದ್ದು, ಹಲವು ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಹೇಳಿದ್ದಾರೆ
ಸಚಿವ ಜೆ.ಸಿ. ಮಾಧುಸ್ವಾಮಿ, 13,000 ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭವಾಗಿದ್ದು, 6779 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.