
ಬೆಂಗಳೂರು: ಕಲ್ಯಾಣ ಕರ್ನಾಟಕ ಜನತೆಗೆ ರಾಜ್ಯ ಸರ್ಕಾರ ಯುಗಾದಿ ಹಬ್ಬದ ಗಿಫ್ಟ್ ನೀಡಿದೆ. ಭದ್ರಾ ಡ್ಯಾಂ ನಿಂದ ನೀರು ಬಿಡಲು ನಿರ್ಧರಿಸಿದೆ.
ಭದ್ರಾ ಡ್ಯಾಂ ನಿಂದ ತುಂಗಭದ್ರಾ ಕಾಲುವೆಗಳಿಗೆ ಏಪ್ರಿಲ್ 1ರಿಂದ ಐದು ದಿನಗಳ ಕಾಲ ನೀರು ಬಿಡಲು ನಿರ್ಧರಿಸಿದೆ. ಇದರಿಂದ ಕೊಪ್ಪಳ, ರಾಯಚೂರು, ಯಾದಗಿರಿ ಭಾಗದ ಜನರಿಗೆ ಅನುಕೂಲವಾಗಲಿದೆ.
ಬೆಳೆಗಳ ಸಂರಕ್ಷಣೆ, ಕುಡಿಯುವ ನೀರು ಪೂರೈಕೆ, ಜಾನುವಾರುಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೀರು ಬಿಡಲು ತೀರ್ಮಾನಿಸಲಾಗಿದೆ. ಇಂದು ಭದ್ರಾ ಡ್ಯಾಂ ನಲ್ಲ್ 28 ಟಿಎಂಸಿ ಲೈವ್ ಸ್ಟೋರೇಜ್ ಇದ್ದು, ಈ ಹಿನ್ನೆಲೆಯಲ್ಲಿ ಐದು ದಿನಗಳ ಕಾಲ 2ಟಿಎಂಸಿ ನೀರು ಹರಿಸಲು ನಿರ್ಧರಿಸಲಾಗಿದೆ.