
ಬೆಂಗಳೂರಿನಿಂದ ಗುವಾಹಟಿಗೆ ಹೊರಟಿದ್ದ ಕಾಮಾಕ್ಯಾ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಒಡಿಶಾದ ಚೌಡವಾರ್ ನಲ್ಲಿ ಈ ದುರಂತ ಸಂಭವಿಸಿದೆ. ಕಾಮಾಕ್ಯಾ ಎಕ್ಸ್ ಪ್ರೆಸ್ ರೈಲಿನ 11 ಬೋಗಿಗಳು ಹಳಿತಪ್ಪಿವೆ. ಘಟನೆ ಓರ್ವ ಪ್ರಯಾಣಿಕ ಸಾವನ್ನಪಿದ್ದು, ಹಲವರು ಹಳಿತಪ್ಪಿದ ರೈಲಿನ ಬೋಗಿಯಡಿ ಸಿಲುಕಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು, ರಕ್ಷಣಾ ತಂಡ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.