ಚೆನ್ನೈ: ಖ್ಯಾತ ನಟ ಹಾಗೂ ಮಕ್ಕಳ್ ನೀದಿ ಮಯ್ಯುಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಚಿಹ್ನೆ ವಿಚಾರವಾಗಿ ಚುನಾವಣಾ ಆಯೋಗದ ವಿರುದ್ಧ ಮದ್ರಾಸ್ ಹೈಕೋರ್ಟ್ ಕೋರ್ಟ್ ಮೆಟ್ಟಿಲೇರಿದ್ದಾರೆ.
ಮಕ್ಕಳ್ ನೀದಿ ಮೈಯ್ಯುಂ ಪಕ್ಷಕ್ಕೆ ಬ್ಯಾಟರಿ ಟಾರ್ಚ್ ಗುರುತಿನ ಚಿಹ್ನೆ ನೀಡುವಂತೆ ಅವರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಆದರೆ, ಆಯೋಗ ಚಿಹ್ನೆಯನ್ನು ಎಂಜಿಆರ್ ಮಕ್ಕಳ್ ಕಚ್ಚಿ ಪಕ್ಷಕ್ಕೆ ನೀಡಿದೆ. ಇದರಿಂದ ಅಸಮಾಧಾನಗೊಂಡಿರುವ ಕಮಲ್ ಹಾಸನ್, ತಮ್ಮ ಪಕ್ಷಕ್ಕೆ ಬ್ಯಾಟರಿ ಟಾರ್ಚ್ ಚಿಹ್ನೆ ನೀಡಲು ಆಯೋಗಕ್ಕೆ ನಿರ್ದೇಶನ ನೀಡಬೇಕು ಹಾಗೂ ಎಂಜಿಆರ್ ಮಕ್ಕಳ್ ಕಚ್ಚಿ ಪಕ್ಷ ಈ ಚಿಹ್ನೆಯನ್ನು ಬಳಸದಂತೆ ತಡೆ ನೀಡಬೇಕೆಂದು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಮಲ್ ಹಾಸನ್ ಬ್ಯಾಟರಿ ಟಾರ್ಚ್ ಗುರುತಿನೊಂದಿಗೆ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದ್ದಾರೆ. ಈ ಚಿಹ್ನೆಯನ್ನು ತಮಗೇ ನೀಡಬೇಕೆಂದು ಮನವಿ ಮಾಡಿದ್ದಾರೆ. ಆದರೆ, ಚುನಾವಣಾ ಆಯೋಗ ಅವರ ಮನವಿಯನ್ನು ಪುರಸ್ಕರಿಸಿಲ್ಲ.