
ಬೆಂಗಳೂರು: ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಇದರೊಂದಿಗೆ ಹೊಸ ಪೊಲೀಸ್ ಕಮಿಷನರ್ ನೇಮಕ ಮಾಡಲಾಗಿದೆ. ಪ್ರತಾಪ್ ರೆಡ್ಡಿ ಅವರನ್ನು ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆಗಿದ್ದ ಪ್ರತಾಪರೆಡ್ಡಿ ಅವರನ್ನು ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ನೇಮಿಸಿದ್ದು, ನೇಮಕಾತಿ ವಿಭಾಗದ ಡಿಜಿಪಿಯಾಗಿ ಕಮಲ್ ಪಂತ್ ಅವರನ್ನು ವರ್ಗಾವಣೆ ಮಾಡಲಾಗಿದೆ.