
2019ರಲ್ಲಿ ತೆರೆಕಂಡಿದ್ದ ಪರಮೇಶ್ ನಿರ್ದೇಶನದ ‘ಕಮರೊಟ್ಟು ಚೆಕ್ ಪೋಸ್ಟ್’ ಚಿತ್ರ ಪ್ರೇಕ್ಷಕರ ಮನ ಮುಟ್ಟುವಲ್ಲಿ ಯಶಸ್ವಿಯಾಗಿತ್ತು. ಇದೀಗ ಇದರ ಮುಂದುವರೆದ ಭಾಗ ‘ಕಮರೊಟ್ಟು 2’ ತೆರೆ ಮೇಲೆ ಬರಲು ಸಜ್ಜಾಗಿದೆ. ಇದರ ಟ್ರೈಲರ್ ನಿನ್ನೆ a2 ಮ್ಯೂಸಿಕ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ.
ಸಸ್ಪೆನ್ಸ್ ಥ್ರಿಲ್ಲರ್ ಹಾರರ್ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ಸ್ವಾಮಿನಾಥನ್ ಅನಂತ ರಾಮನ್, ಪ್ರಿಯಾಂಕ ಉಪೇಂದ್ರ, ರಜಿನಿ ಭಾರದ್ವಾಜ್, ರಾಘವೇಂದ್ರ ರಾಜಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕನಸು ಪಿಚ್ಚರ್ಸ್ ಬ್ಯಾನರ್ ನಲ್ಲಿ ಪವನ್ ಗೌಡ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ರವೀಶ್ ಸಂಗೀತ ಸಂಯೋಜನೆ ನೀಡಿದ್ದಾರೆ. ಆರ್ಯನ್ ಮುಕ್ತರಾಜ್ ಸಂಕಲನ, ಪ್ರಜ್ವಲ್ ಗೌಡ ಛಾಯಾಗ್ರಹಣವಿದೆ. ಸುಮಾರು ಆರು ಭಾಷೆಗಳಲ್ಲಿ ಈ ಚಿತ್ರ ತೆರೆ ಕಾಣಲಿದೆ.