ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಬೆಂಬಲ ಘೋಷಿಸಿದೆ. ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ.
ನಟ ಶಿವರಾಜ್ ಕುಮಾರ್ ಭೇಟಿ ಬಳಿಕ ಮಾತನಾಡಿದ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್, ಕರ್ನಾಟಕ ಬಂದ್ ಗೆ ಕನ್ನಡ ಚಿತ್ರರಂಗ ಬೆಂಬಲ ಘೋಷಿಸಿದೆ. ಕಾವೇರಿ ನೀರಿಗಾಗಿ ಹೋರಾಟಕ್ಕೆ ಶಿವರಾಜ್ ಕುಮಾರ್ ಬೆಂಬಲಿಸುವುದಾಗಿ ಹೇಳಿದ್ದಾರೆ. ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಪ್ರತಿಭಟನೆಯಲ್ಲಿ ಚಿತ್ರರಂಗದ ನಟ-ನಟಿಯರು ಭಾಗವಹಿಸಲಿದ್ದಾರೆ. ವಿಜಯ್ ರಾಘವೇಂದ್ರ, ಶ್ರೀಮುರುಳಿ, ಧ್ರುವ ಸರ್ಜಾ, ಪ್ರೇಮ್, ಅಜಯ್ ರಾವ್, ವಿನೋದ್ ಪ್ರಭಾಕರ್, ಮಾಲಾಶ್ರೀ, ಶೃತಿ, ಪ್ರೇಮಾ ಸೇರಿದಂತೆ ಎಲ್ಲರಿಗೂ ಆಹ್ವಾನಿಸಲಾಗಿದೆ. ಎಲ್ಲರೂ ಭಾಗವಹಿಸುವ ನಿರೀಕ್ಷೆ ಇದೆ. ಶಿವಣ್ಣ ಬರ್ತೀನಿ ಎಂದ ಮೇಲೆ ನಮಗೆ ಆನೆಬಲ ಸಿಕ್ಕಂತಾಗಿದೆ ಎಂದು ಹೇಳಿದರು.