ಭೋಪಾಲ್: ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ಕೋರಿ ಅರ್ಜಿ ಮಧ್ಯಪ್ರದೇಶದ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.
ಚಿತ್ರದಲ್ಲಿ ಸಿಖ್ ಸಮುದಾಯ ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಹಿನ್ನಲೆಯಲ್ಲಿ ಸಿನಿಮಾ ಪ್ರೊಡಕ್ಷನ್ಸ್, ಕೇಂದ್ರ ಸರ್ಕಾರ, ಸೆನ್ಸಾರ್ ಮಂಡಳಿಗೆ ಮಧ್ಯಪ್ರದೇಶ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ನಾಳೆ ಈ ಬಗ್ಗೆ ಮಧ್ಯಪ್ರದೇಶ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ‘ಎಮರ್ಜೆನ್ಸಿ’ ಸಿನಿಮಾ ಸೆಪ್ಟೆಂಬರ್ 6ರಂದು ತೆರೆ ಕಾಣಬೇಕಿತ್ತು, ಸೆನ್ಸಾರ್ ಮಂಡಳಿಯಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಹೀಗಾಗಿ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಲಾಗಿದೆ.