
ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ ಎಂದು ಖ್ಯಾತ ನಟ ಕಿಚ್ಚ ಸುದೀಪ್ ಸಂದರ್ಶನವೊಂದರಲ್ಲಿ ಹೇಳಿದ್ದು, ಆ ಬಳಿಕ ಇದಕ್ಕೆ ಬಾಲಿವುಡ್ ನಟ ಅಜಯ್ ದೇವಗನ್ ಸಾಮಾಜಿಕ ಜಾಲತಾಣ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿದ್ದರು. ಹಿಂದಿ ನಮ್ಮ ರಾಷ್ಟ್ರ ಭಾಷೆ ಎಂದು ಹೇಳಿದ್ದ ಅಜಯ್ ದೇವಗನ್, ರಾಷ್ಟ್ರ ಭಾಷೆಯಲ್ಲ ಎಂದ ಮೇಲೆ ನಿಮ್ಮ ಚಿತ್ರಗಳನ್ನು ಹಿಂದಿಗೆ ಏಕೆ ಡಬ್ ಮಾಡುತ್ತೀರಿ ಎಂದು ಪ್ರಶ್ನಿಸಿದ್ದರು.
ಇದಕ್ಕೆ ಕಿಚ್ಚ ಸುದೀಪ್ ಸಮರ್ಪಕವಾಗಿ ಉತ್ತರಿಸಿದ್ದು, ದೇಶದಾದ್ಯಂತ ನೆಟ್ಟಿಗರು ಸಹ ಹಿಂದಿ ರಾಷ್ಟ್ರ ಭಾಷೆ ಎಂದು ಹೇಳಿದ ಅಜಯ್ ದೇವಗನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಕರ್ನಾಟಕದಲ್ಲಿ ಕನ್ನಡಪರ ಸಂಘಟನೆಗಳು, ಅಜಯ್ ದೇವಗನ್ ವಿರುದ್ಧ ಪ್ರತಿಭಟನೆಯನ್ನು ಸಹ ನಡೆಸಿದ್ದವು.
BIG NEWS: ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣ; ಸಂತ್ರಸ್ತೆ ಸ್ಥಿತಿ ಗಂಭೀರ; ಚಿಕಿತ್ಸಾ ವೆಚ್ಚ ಸರ್ಕಾರದಿಂದಲೇ ಭರಿಸುತ್ತೇವೆ ಎಂದ ಸಚಿವ ಡಾ.ಸುಧಾಕರ್
ಇದೀಗ ವಿವಾದಕ್ಕೆ ನಟಿ ಕಂಗನಾ ರಣಾವತ್ ಕೂಡ ಪ್ರವೇಶಿಸಿದ್ದಾರೆ. ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುವ ಕಂಗನಾ, ಈ ವಿಚಾರದಲ್ಲಿ ಅಜಯ್ ದೇವಗನ್ ಅವರನ್ನು ಪರೋಕ್ಷವಾಗಿ ಸಮರ್ಥಿಸುತ್ತಲೆ ನನ್ನ ಅಭಿಪ್ರಾಯದಲ್ಲಿ ಸಂಸ್ಕೃತ ಭಾರತದ ರಾಷ್ಟ್ರ ಭಾಷೆಯಾಗಬೇಕು ಎಂದು ಹೇಳಿದ್ದಾರೆ. ಅಲ್ಲದೆ ಭಾರತದ ಬಹುತೇಕ ಭಾಷೆಗಳು ಸಂಸ್ಕೃತದಿಂದ ಬಂದಿದೆ ಎಂದು ಕಂಗನಾ ಅಭಿಪ್ರಾಯಪಟ್ಟಿದ್ದಾರೆ.