ಬಾಲಿವುಡ್ ನಟಿ ಕಂಗನಾ ರಣಾವತ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭಾನುವಾರ ಭೇಟಿ ಮಾಡಿದ್ದು, ಈ ಭೇಟಿ ತುಂಬಾ ಸಂತಸ ತಂದಿದೆ ಎಂದು ಹೇಳಿಕೊಂಡಿದ್ದಾರೆ.
ಈ ಬಗ್ಗೆ ತಮ್ಮ ಇನ್ ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಕಂಗನಾ, ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಅಭೂತಪೂರ್ವವಾದ ಗೆಲುವು ಸಾಧಿಸಿರುವ ಮಹಾರಾಜ್ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದು ನನ್ನ ಅದೃಷ್ಠ ಎಂದು ಬಣ್ಣಿಸಿದ್ದಾರೆ.
ಬಾಯಲ್ಲಿ ಜೊಲ್ಲು ಸೋರುವುದನ್ನು ತಡೆಗಟ್ಟಲು ಇಲ್ಲಿದೆ ‘ಮನೆ ಮದ್ದು’
ಮಹಾರಾಜ್ ಜಿಯವರನ್ನು ಭೇಟಿ ಮಾಡಿದ ಈ ಸಂಜೆ ಅದ್ಭುತವಾದುದು. ಮುಖ್ಯಮಂತ್ರಿಗಳ ಸಹಾನುಭೂತಿ, ಕಾಳಜಿ, ಆಳವಾದ ಪ್ರಜ್ಞೆಯು ನನ್ನನ್ನು ಮೂಕವಿಸ್ಮಿತಳನ್ನಾಗಿಸಿದೆ. ಅವರ ಈ ಗುಣಗಳಿಂದಾಗಿ ನಾನು ಅವರನ್ನು ಅತ್ಯಂತ ಹೆಚ್ಚು ಗೌರವಿಸುತ್ತೇನೆ ಮತ್ತು ಸ್ಫೂರ್ತಿ ಪಡೆಯುತ್ತೇನೆ ಎಂದಿದ್ದಾರೆ.
ಕಂಗನಾ ರಣಾವತ್ ಕಳೆದ ಹಲವು ವರ್ಷಗಳಿಂದ ಭಾರತೀಯ ಜನತಾ ಪಕ್ಷದ ಕಟ್ಟಾ ಅಭಿಮಾನಿಯಾಗಿದ್ದು, ತಮ್ಮ ಸಾಮಾಜಿಕ ಮಾಧ್ಯಮಗಳು ಮತ್ತು ಬಹಿರಂಗವಾಗಿಯೇ ಬಿಜೆಪಿಗೆ ಬೆಂಬಲ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಈ ಬಾಲಿವುಡ್ ನಟಿ, ಯೋಗಿ ಆದಿತ್ಯನಾಥ್ ಅವರಿಗೆ ಶುಭಾಶಯಗಳನ್ನು ಕೋರಿ ಕೊಂಡಾಡಿದ್ದರು.