ಕಂಗನಾ ರಣಾವತ್ ತಮ್ಮ ಮುಂಬರುವ ಸಿನಿಮಾ ಥಲೈವಿ ರಿಲೀಸ್ಗೂ ಮುನ್ನ ಚಿತ್ರಮಂದಿರಗಳನ್ನು ತೆರೆಯುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದಾರೆ. ಚಿತ್ರ ಮಂದಿರಗಳನ್ನು ತೆರೆಯುವ ಮೂಲಕ ಸಾಯುತ್ತಿರುವ ಸಿನಿಮಾ ಇಂಡಸ್ಟ್ರಿಯನ್ನು ಬಚಾವ್ ಮಾಡುವಂತೆ ಕೇಳಿಕೊಂಡಿದ್ದಾರೆ.
ಇನ್ಸ್ಟಾಗ್ರಾಂನ ಸ್ಟೋರಿ ವಿಭಾಗದಲ್ಲಿ ಕಂಗನಾ ರಣಾವತ್ ಮಹಾರಾಷ್ಟ್ರ ಸರ್ಕಾರದ ಎದುರು ಈ ಬೇಡಿಕೆಯನ್ನು ಇಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಹೀಗಾಗಿ ಮಹಾರಾಷ್ಟ್ರ ಸರ್ಕಾರ ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ಮಾಡಿಕೊಡಬೇಕು ಹಾಗೂ ಈ ಮೂಲಕ ಸಾಯುತ್ತಿರುವ ಸಿನಿಮಾ ಇಂಡಸ್ಟ್ರಿಯನ್ನು ಬದುಕಿಸಿಕೊಡಬೇಕು ಎಂದು ಬರೆದುಕೊಂಡಿದ್ದಾರೆ.
ಮಹಾರಾಷ್ಟ್ರದಲ್ಲಿ ರೆಸ್ಟೋರೆಂಟ್ಗಳು, ಹೋಟೆಲ್, ಆಫೀಸು, ಸ್ಥಳೀಯ ರೈಲು ಹೀಗೆ ಎಲ್ಲವೂ ಸಾರ್ವಜನಿಕ ಸೇವೆಗೆ ಮುಕ್ತವಾಗಿದೆ ಆದರೆ ಸಿನಿಮಾ ಮಂದಿರ ತೆರೆಯಲು ಮಾತ್ರ ಕೋವಿಡ್ ಕಾರಣ ನೀಡಲಾಗ್ತಿದೆ. ಮಹಾರಾಷ್ಟ್ರ ಸರ್ಕಾರದ ಪ್ರಕಾರ ಕೋವಿಡ್ ಸಿನಿಮಾ ಮಂದಿರಗಳಲ್ಲಿ ಮಾತ್ರ ಹರಡುತ್ತದೆ ಎಂದು ಕಂಗನಾ ಕಿಡಿಕಾರಿದ್ದಾರೆ.
ತಮಿಳುನಾಡು ಮಾಜಿ ಸಿಎಂ ಹಾಗೂ ಮಾಜಿ ನಟಿ ದಿವಂಗತ ಜಯಲಲಿತಾರ ಜೀವನ ಚರಿತ್ರೆ ಆಧಾರಿತ ಸಿನಿಮಾ ಥಲೈವಿಯಲ್ಲಿ ನಟಿ ಕಂಗನಾ ರಣಾವತ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾ ಹಿಂದಿ, ತೆಲಗು ಹಾಗೂ ತಮಿಳು ಭಾಷೆಗಳಲ್ಲಿ ರಿಲೀಸ್ ಆಗಲಿದೆ.