ಸಿಪಿಐ ಮುಖಂಡ ಹಾಗೂ ಜೆಎನ್ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಹಾಗೂ ಗುಜರಾತ್ನ ದಲಿತ ನಾಯಕ ಜಿಗ್ನೇಶ್ ಮೇವಾನಿ ಇಂದು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ. ಬಿಜೆಪಿ ಆಡಳಿತದ ಗುಜರಾತ್ನಲ್ಲಿ ಮುಂದಿನ ವರ್ಷ ವಿಧಾನಸಭೆ ನಡೆಯಲಿದ್ದು ಅದಕ್ಕೂ ಮುಂಚಿತವಾಗಿ ಇದೊಂದು ಮಹತ್ವದ ರಾಜಕೀಯ ಬೆಳವಣಿಗೆ ನಡೆಯಲಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಸಿಪಿಐ ಪಕ್ಷ ಸೇರ್ಪಡೆಯಾಗಿದ್ದ ಕನ್ಹಯ್ಯ ಕುಮಾರ್ ಬಿಹಾರದ ಬೆಗುಸರಾಯ್ನಲ್ಲಿ ಸ್ಪರ್ಧಿಸಿ ಬಿಜೆಪಿಯ ಗಿರಿರಾಜ್ ಸಿಂಗ್ ಎದುರು ಸೋಲನ್ನು ಕಂಡಿದ್ದರು. ಮೂಲಗಳ ಪ್ರಕಾರ ದೆಹಲಿಯಲ್ಲಿಂದು ಕನ್ಹಯ್ಯ ಕುಮಾರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಗುಜರಾತ್ನ ವದ್ಗಾಮ್ ಕ್ಷೇತ್ರದ ಪಕ್ಷೇತರ ಶಾಸಕ ಮೇವಾನಿ ಮಂಗಳವಾರ ಕಾಂಗ್ರೆಸ್ಗೆ ಸೇರ್ಪಡೆಯಾಗೋದಾಗಿ ಶನಿವಾರ ಮಾಹಿತಿ ನೀಡಿದ್ದರು. ರಾಷ್ಟ್ರೀಯ ದಲಿತ ಅಧಿಕಾರ ಮಂಚ್ನ ಮೇವಾನಿ 2017ರಲ್ಲಿ ಕಾಂಗ್ರೆಸ್ನ ಬೆಂಬಲದೊಂದಿಗೆ ಬನಸ್ಕಾಂತ ಜಿಲ್ಲೆಯ ವಡ್ಗಾಂ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವು ಕಂಡಿದ್ದಾರೆ.