ಬೆಂಗಳೂರು: ರಾಜಸ್ಥಾನದ ಉದಯ್ ಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ರಾಜ್ಯದಲಿಯೂ ಪ್ರತಿಭಟನೆಗಳು ತೀವ್ರಗೊಂಡಿದ್ದು, ಹಿಂದೂ ಪರ ಸಂಘಟನೆ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿದ ಪೋಸ್ಟ್ ಹಾಕಿದ್ದಕ್ಕೆ ಕನ್ಹಯ್ಯ ಲಾಲ್ ನನ್ನು ಶಿರಚ್ಛೇದ ಮಾಡಿದ್ದ ಹಂತಕರಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಶಿವಮೊಗ್ಗ, ಹಾಸನ, ರಾಮನಗರ, ಮಂಡ್ಯ, ಮೈಸೂರು, ಉಡುಪಿ, ಬಳ್ಳಾರಿ, ಬೆಳಗಾವಿ, ಧಾರವಾಡ, ದಾವಣಗೆರೆ, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ.
ಕನ್ಹಯ್ಯ ಲಾಲ್ ನನ್ನು ಹತ್ಯೆಗೈದ ಹಂತಕರನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದು, ರಾಜಸ್ಥಾನದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಕಿಚ್ಚು ಇದೀಗ ಕರುನಾಡಿಗೂ ವ್ಯಾಪಿಸಿದೆ.