alex Certify ರಾಜ್ಯದ 75 ಸಾಧಕರಿಗೆ ʻಕನ್ನಡ ಸಂಸ್ಕೃತಿ ಇಲಾಖೆ ಪ್ರಶಸ್ತಿʼ ಗರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ 75 ಸಾಧಕರಿಗೆ ʻಕನ್ನಡ ಸಂಸ್ಕೃತಿ ಇಲಾಖೆ ಪ್ರಶಸ್ತಿʼ ಗರಿ

ಬೆಂಗಳೂರು : ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ. ನಾವು ಮೂಗು ತೂರಿಸುವುದಿಲ್ಲ. ಈ ವಿಚಾರದಲ್ಲಿ ನಾನು ಬಹಳ ನಿಷ್ಠುರವಾಗಿ ವರ್ತಿಸುತ್ತೇನೆ. ನನ್ನ ಮೇಲೆ ಒತ್ತಡ ಹಾಕುವ ಎಲ್ಲರಿಗೂ ನಾನು ಅಷ್ಟೆ ನಿಷ್ಠುರವಾಗಿ ಹೇಳಿಬಿಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “2021 ರಿಂದ 2024ನೇ ಸಾಲಿನ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳನ್ನು ನಾಡಿನ ವಿವಿಧ ಗಣ್ಯರಿಗೆ ಪ್ರದಾನ ಮಾಡಿ ಗೌರವಿಸಿ ಮಾತನಾಡಿದರು.

ಸಾಹಿತ್ಯ, ಕಲೆ , ಸಂಸ್ಕೃತಿ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಉತ್ತೇಜನ ನೀಡುವುದು ಸಮಾಜ ಮತ್ತು ಸರ್ಕಾರದ ಜವಾಬ್ದಾರಿ. ನಮ್ಮ ಸರ್ಕಾರ ಕಲೆ, ಸಾಹಿತ್ಯ, ಸಂಸ್ಕೃತಿಗೆ ಪ್ರೋತ್ಸಾಹ ನೀಡುವುದರಲ್ಲಿ ಹಿಂದೆ ಬೀಳುವುದಿಲ್ಲ ಎಂದರು.

ಪ್ರಶಸ್ತಿಗಳ ಆಯ್ಕೆಯಲ್ಲಿ ಆಯ್ಕೆ ಸಮಿತಿ ನಿರ್ಣಯವೇ ಅಂತಿಮ. ನಾವು ಮೂಗು ತೂರಿಸುವುದಿಲ್ಲ. ಈ ವಿಚಾರದಲ್ಲಿ ನಾನು ಬಹಳ ನಿಷ್ಠುರವಾಗಿ ವರ್ತಿಸುತ್ತೇನೆ. ನನ್ನ ಮೇಲೆ ಒತ್ತಡ ಹಾಕುವ ಎಲ್ಲರಿಗೂ ನಾನು ಅಷ್ಟೆ ನಿಷ್ಠುರವಾಗಿ ಹೇಳಿಬಿಡುತ್ತೇನೆ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ಜನರ ನಂಬಿಕೆಗಳನ್ನು ಗೌರವಿಸುತ್ತದೆ. ಬಸವಣ್ಣನವರು ಮೌಡ್ಯ ಮುಕ್ತ, ಜಾತಿ ಮುಕ್ತ, ವರ್ಗ ಮುಕ್ತ ಸಮ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದ್ದರು. ಅದಕ್ಕೆ ದೇಹವೇ ದೇಗುಲ ಎಂದು ವಚನಕಾರರು ಪ್ರತಿಪಾದಿಸಿದ್ದಾರೆ. ಆದರೆ ಕೆಲವರು ದೇವಸ್ಥಾನದಲ್ಲಿ ಮಾತ್ರ ದೇವರಿದ್ದಾನೆ ಎಬ್ನುವ ನಂಬಿಕೆಯಿಂದ ಹೋಗುತ್ತಾರೆ. ಅವರ ನಂಬಿಕೆಯನ್ನೂ ಗೌರವಿಸುತ್ತೇವೆ. ದೇವಸ್ಥಾನಕ್ಕೆ ಹೋಗುವವರು ಅವರ ಇಷ್ಟದ ಉಡುಪು ಧರಿಸಿ ಹೋಗಬಹುದು. ಈ ವಿಚಾರದಲ್ಲೂ ನಮ್ಮದೇನೂ ಅಭ್ಯಂತರ ಇಲ್ಲ. ದೇವರು, ಧರ್ಮದ ಬಗ್ಗೆ ಯಾರ ನಂಬಿಕೆ ಏನೇ ಇದ್ದರೂ ಎಲ್ಲರೂ ಮೊದಲು ಮನುಷ್ಯರಾಗಬೇಕು. ಮನುಷ್ಯ ಮನುಷ್ಯರನ್ನು ದ್ವೇಷಿಸಬಾರದು. ಇದೇ ಅತ್ಯುನ್ನತ ಮೌಲ್ಯ ಎಂದರು.

ರವೀಂದ್ರ ಕಲಾಕ್ಷೇತ್ರ ಮತ್ತು ಸಂಸ ರಂಗ ಮಂದಿರ ನವೀಕರಣಕ್ಕೆ ಇಷ್ಟೆ ಖರ್ಚು ಮಾಡಬೇಕು ಎನ್ನುವ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. 24 ಕೋಟಿ ರೂಪಾಯಿ ಖರ್ಚು ಮಾಡಿ ನವೀಕರಣ ಮಾಡುತ್ತಿದೆ ಎನ್ನುವುದು ಸರಿಯಲ್ಲ. ಮೊತ್ತದ ಬಗ್ಗೆ ಯಾವ ತೀರ್ಮಾನವೂ ಆಗಿಲ್ಲ ಎಂದು ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “2021 ರಿಂದ 2024ನೇ ಸಾಲಿನ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳಾದ ಬಸವ ರಾಷ್ಟ್ರೀಯ ಪುರಸ್ಕಾರ, ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ, ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ, ಪಂಡಿತ್ ಪಂಚಾಕ್ಷರಿ ಗವಾಯಿ ಪ್ರಶಸ್ತಿ, ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಅಕ್ಕಮಹಾದೇವಿ ಪ್ರಶಸ್ತಿ, ಕನಕಶ್ರೀ ಪ್ರಶಸ್ತಿ, ಪಂಪ ಪ್ರಶಸ್ತಿ, ಶ್ರೀ ನಿಜಗುಣ ಪುರಂದರ ಪ್ರಶಸ್ತಿ, ಕುಮಾರವ್ಯಾಸ ಪ್ರಶಸ್ತಿ, ಶಾಂತಲಾ ನಾಟ್ಯರಾಣಿ ಪ್ರಶಸ್ತಿ, ಸಂತ ಶಿಶುನಾಳ ಷರೀಫ ಪ್ರಶಸ್ತಿ,  ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ, ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಬಿ.ವಿ.ಕಾರಂತ ಪ್ರಶಸ್ತಿ, ಡಾ.ಗುಬ್ಬಿ ವೀರಣ್ಣ ಪ್ರಶಸ್ತಿ, ಡಾ.ಸಿದ್ದಲಿಂಗಯ್ಯ ಸಾಹಿತ್ಯ ಪ್ರಶಸ್ತಿ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ, ಜಾನಪದಶ್ರೀ ಪ್ರಶಸ್ತಿ”ಗಳನ್ನು ನಾಡಿನ ವಿವಿಧ ಗಣ್ಯರಿಗೆ ಪ್ರದಾನ ಮಾಡಿ ಗೌರವಿಸಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...