alex Certify ಶೇ. 60ರಷ್ಟು ಕನ್ನಡ ಫಲಕ ಹಾಕದ ಮಳಿಗೆ ಮುಚ್ಚಬೇಡಿ: ಹೈಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೇ. 60ರಷ್ಟು ಕನ್ನಡ ಫಲಕ ಹಾಕದ ಮಳಿಗೆ ಮುಚ್ಚಬೇಡಿ: ಹೈಕೋರ್ಟ್ ಆದೇಶ

ಬೆಂಗಳೂರು: ಶೇಕಡ 60ರಷ್ಟು ಕನ್ನಡ ಫಲಕ ಹಾಕಿಲ್ಲವೆಂದು ಮಳಿಗೆಗಳನ್ನು ಮುಚ್ಚುವುದು ಸರಿಯಲ್ಲ ಎಂದು ಹೈಕೋರ್ಟ್ ಹೇಳಿದೆ.

ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಸದ ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ ಕ್ರಮ ಜರುಗಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ರಾಜ್ಯದ ವಾಣಿಜ್ಯ ಸಂಸ್ಥೆಗಳ ನಾಮಪಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಕೆ ಕಡ್ಡಾಯಗೊಳಿಸಿ ಜಾರಿಗೊಳಿಸಲಾದ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ ಅನ್ವಯ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಸದ ಸಂಸ್ಥೆಗಳನ್ನು ಮುಚ್ಚುವುದಾಗಿ 2024ರ ಫೆಬ್ರವರಿ 28ರಂದು ಸುತ್ತೋಲೆ ಹೊರಡಿಸಲಾಗಿದ್ದು, ಇದನ್ನು ಪ್ರಶ್ನಿಸಿ ರಿಟೇಲರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ, ಟೈಟಾನ್ ಕಂಪನಿ, ಪಿವಿಆರ್ ಐನಾಕ್ಸ್ ಮತ್ತಿತರ ಬೃಹತ್ ವಾಣಿಜ್ಯ ಸಂಸ್ಥೆಗಳು ಹೈಕೋರ್ಟಿಗೆ ತಕರಾರು ಅರ್ಜಿ ಸಲ್ಲಿಸಿವೆ.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಸಿದ ವಾಣಿಜ್ಯ ಸಂಸ್ಥೆಗಳನ್ನು ಮುಚ್ಚುವುದಾಗಿ ತಿಳಿಸಿರುವುದು ಕಠಿಣ ಕ್ರಮವಾಗಲಿದೆ ದಂಡ ಹಾಕುವ ಅಥವಾ ಪರವಾನಿಗೆ ರದ್ದುಪಡಿಸುವ ಕ್ರಮವಾದರೆ ಯೋಚಿಸಬಹುದು. ಆದರೆ, ಸಂಸ್ಥೆಯನ್ನೇ ಮುಚ್ಚುವುದು ಸರಿಯಾದ ಕ್ರಮವಲ್ಲ. ಕಾಯಿದೆ ಮೂಲಕ ನಿಯಮಗಳನ್ನು ಸುತ್ತೋಲೆ ರೂಪದಲ್ಲಿ ಜಾರಿಗೊಳಿಸಲು ಸಾಧ್ಯವಿಲ್ಲ. ವಾಣಿಜ್ಯ ಸಂಸ್ಥೆಗಳನ್ನು ಮುಚ್ಚುವಂತಹ ಬಲವಂತದ ಕ್ರಮ ಜರುಗಿಸಬಾರದು. ಸುತ್ತೋಲೆಯಲ್ಲಿ ಉಲ್ಲೇಖಿಸಿರುವ ಇತರೆ ಅಂಶಗಳು ಅರ್ಜಿ ಕುರಿತ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತವೆ ಎಂದು ಮಧ್ಯಂತರ ಆದೇಶ ನೀಡಿದೆ.

ಯಾವ ದಿನದಿಂದ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ ಜಾರಿ ಮಾಡಲಾಗಿದೆ ಎಂಬ ಬಗ್ಗೆ ಗೆಜೆಟ್ ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಸಿ ಸರ್ಕಾರ ಮಾಹಿತಿ ನೀಡಬೇಕು ಎಂದು ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಮಾರ್ಚ್ 22ಕ್ಕೆ ಮುಂದೂಡಲಾಗಿದೆ.

ಶೇ. 60ರಷ್ಟು ಕನ್ನಡ ಬಳಕೆಗೆ ರೂಪಿಸಿದ ಕಾಯ್ದೆ ನಿಯಮಗಳನ್ನು ನ್ಯಾಯಾಲಯ ಪರಿಶೀಲಿಸಿ ಉತ್ತರ ನೀಡಲಿದೆ. ಕಾಯ್ದೆಯ ಎಲ್ಲಾ ಅಂಶಗಳಿಗೆ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಲಿದೆ. ವಾಣಿಜ್ಯ ಸಂಸ್ಥೆಗಳನ್ನು ಮುಚ್ಚುವುದನ್ನು ನ್ಯಾಯಾಲಯ ಸಹ ಒಪ್ಪುವುದಿಲ್ಲ. ಆದರೆ, ನಾಮಫಲಕದಲ್ಲಿ ಕನ್ನಡವನ್ನು ದೊಡ್ಡದಾಗಿ ಬಳಸಿದರೆ ನಿಮಗೆ ಯಾವ ಸಮಸ್ಯೆಯಾಗುತ್ತದೆ ಎಂದು ನನಗೆ ಅರ್ಥವಾಗುತ್ತಿಲ್ಲ. ಕನ್ನಡ ಬಳಕೆಗೆ ಸಮಯಾವಕಾಶ ಬೇಕಾದರೆ ಸರ್ಕಾರ ಒದಗಿಸುತ್ತದೆ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...