ಬೆಂಗಳೂರು: ಕನ್ನಡ ಭಾಷೆಗೆ ಅವಮಾನ ಮಾಡಿದ ಗೂಗಲ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಭಾರತದ ಅತ್ಯಂತ ಕೊಳಕು ಭಾಷೆ ಕನ್ನಡ ಎಂದು ಗೂಗಲ್ ಹೇಳಿದ್ದು, ತನ್ನ ತಪ್ಪಿನ ಅರಿವಾಗುತ್ತಲೇ ಕನ್ನಡಿಗರ ಮನವೊಲಿಕೆಗೆ ಮುಂದಾಗಿದೆ. ಕನ್ನಡ ಜಗತ್ತಿನ ಭಾಷೆಗಳ ರಾಣಿ ಎಂದಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಆಕ್ರೋಶಕ್ಕೆ ಮಣಿದ ಗೂಗಲ್ ನನ್ನ ತಪ್ಪನ್ನು ಸರಿಪಡಿಸಿಕೊಂಡಿದೆ. ಕಾನೂನು ಕ್ರಮ ಕೈಗೊಳ್ಳಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ. ಕನ್ನಡಪರ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಬೈಯಪ್ಪನಹಳ್ಳಿ ಪೊಲೀಸ್ ಠಾಣೆಗೆ ಕನ್ನಡಪರ ಸಂಘಟನೆಗಳಿಂದ ದೂರು ನೀಡಲಾಗಿದೆ. ಗೂಗಲ್ ಕಚೇರಿ ಎದುರು ಪ್ರತಿಭಟನೆ, ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಕನ್ನಡ ಭಾಷೆಯ ವಿರುದ್ಧ ಅವಮಾನ ಮಾಡಿದ ಗೂಗಲ್ ವಿರುದ್ಧ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಕೆಂಡಕಾರಿದ್ದಾರೆ. ಕರ್ನಾಟಕ ಸರ್ಕಾರ ಮತ್ತು ಭಾರತ ಸರ್ಕಾರ ಗೂಗಲ್ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಅನುಸಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಗೂಗಲ್ ಗೆ ನೋಟಿಸ್ ನೀಡಲು ರಾಜ್ಯ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.