ಬೆಂಗಳೂರು : ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ, ಇದರಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕನ್ನಡ ಕಾವಲು ಸಮಿತಿಯ ಅಧ್ಯಕ್ಷನಾಗಿ ರಾಜಕೀಯ ಬದುಕು ಆರಂಭಿಸಿದ ನನಗೆ ಕನ್ನಡ ಭಾಷೆ ಮತ್ತು ಕನ್ನಡಿಗರ ಹಿತವೇ ಮೊದಲ ಆದ್ಯತೆ. ಇದರಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲಎಂದು ಹೇಳಿದ್ದಾರೆ.
ಕರುನಾಡಿನಲ್ಲಿಯೇ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಬಂದು ಇಲ್ಲಿ ಬದುಕು ಕಟ್ಟಿಕೊಂಡವರೆಲ್ಲರೂ ಹೆಚ್ಚೆಚ್ಚು ಕನ್ನಡ ಭಾಷೆಯಲ್ಲೇ ವ್ಯವಹರಿಸಬೇಕು ಎಂಬುದು ನಮ್ಮ ಆಶಯ. ಇದಕ್ಕಾಗಿ ರಾಜ್ಯಾದ್ಯಂತ ಇರುವ ವಾಣಿಜ್ಯ ಮಳಿಗೆಗಳು ಹಾಗೂ ಕೈಗಾರಿಕೋದ್ಯಮಗಳ ನಾಮಫಲಕಗಳಲ್ಲಿ ಶೇ.60 ಕನ್ನಡ ಬಳಕೆ ಕಡ್ಡಾಯ ಮಾಡಿ ಸುಗ್ರೀವಾಜ್ಞೆ ಹೊರಡಿಸಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.