ಬೆಂಗಳೂರು : ರಾಜ್ಯದ ಮದರಸಾಗಳಲ್ಲಿ ವಾರಕ್ಕೆ 2 ದಿನ ಕನ್ನಡ ಕಲಿಸುವ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದ್ದು, ಶೀಘ್ರವೇ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ.
ರಾಜ್ಯದ ಮದರಸಾಗಳಲ್ಲಿ ವಾರಕ್ಕೆ 2 ದಿನ ಕನ್ನಡ ಕಲಿಸುವ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದ್ದು, ಪ್ರಾಯೋಗಿಕವಾಗಿ ಬೆಂಗಳೂರು, ವಿಜಯಪುರ, ರಾಯಚೂರು ಹಾಗೂ ಕಲಬುರಗಿಯ ಕೆಲ ಆಯ್ದ ಮದರಸಾಗಳಲ್ಲಿ ಶುರು ಮಾಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.