ಬೆಂಗಳೂರು: ಕನ್ನಡ ನಾಮಫಲಕ ಕಡ್ದಾಯ ವಿಚಾರವಾಗಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ನಾಡಿನಲ್ಲಿ ಕನ್ನಡ ಬೋರ್ಡ್ ಇರಲೇಬೇಕು. ಎಲ್ಲರೂ ಕನ್ನಡ ನಾಮಫಲಕ ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ವಿಚಾರವಾಗಿ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಕನ್ನಡ ಬೋರ್ಡ್ ಹಾಕಬೇಕು. ಬೇರೆ ಭಾಷೆಯ ಬೋರ್ಡ್ ಗಳನ್ನು ಹಾಕುವಂತಿಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ಕನ್ನಡ ನಾಮಫಲಕ ನಿಯಮ ಮಾಡುವ ಬಗ್ಗೆಯೂ ಚಿಂತನೆ ನಡೆದಿದೆ. ಈ ಬಗ್ಗೆಯೂ ನಿರ್ಧರಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಕರವೇ ಪ್ರತಿಭಟನೆ ವಿಚಾರವಾಗಿ ಯಾರೇ ಆಗಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿ. ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ. ಕಾನೂನು ಉಲ್ಲಂಘಿಸಿದರೆ ಅವರ ವಿರುದ್ಧ ಕ್ರಮವಾಗಲಿದೆ ಎಂದು ಹೇಳಿದರು.