alex Certify ʼಅಯ್ಯೋ… ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆʼ: ಬಿಜೆಪಿ ನಾಯಕರಿಗೆ ನನ್ನ ಧಿಕ್ಕಾರ ಎಂದ ಹೆಚ್​ಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಅಯ್ಯೋ… ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆʼ: ಬಿಜೆಪಿ ನಾಯಕರಿಗೆ ನನ್ನ ಧಿಕ್ಕಾರ ಎಂದ ಹೆಚ್​ಡಿಕೆ

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರರೋಗ ವಿಜ್ಞಾನ ಸಂಸ್ಥೆಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಕನ್ನಡಕ್ಕೆ ಅವಮಾನ ಮಾಡಲಿದೆ ಎಂದು ಮಾಜಿ ಸಿಎಂ ಹೆಚ್​​.ಡಿ ಕುಮಾರ್​ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ​ಮಾಡಿರುವ ಅವರು ಕನ್ನಡ ಕಟುಕುರ ಕೈಯಲ್ಲಿ ಸಿಕ್ಕಿಕೊಂಡಿದೆ ಎಂದು ಕುಟುಕಿದ್ದಾರೆ.

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ(ನಿಮ್ಹಾನ್ಸ್​) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ, ಇಂಗ್ಲೀಷ್​ಗೆ ದ್ವಿತೀಯ ಸ್ಥಾನ, ಕನ್ನಡಕ್ಕೆ ಮೂರನೇ ಸ್ಥಾನ, ಅಯ್ಯೋ… ಕನ್ನಡ ಕುಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿರ್ದೇಶನ ಇನ್ನೊಂದಿಲ್ಲ ಎಂದು ಹೆಚ್​.ಡಿ ಕುಮಾರಸ್ವಾಮಿ ಸರಣಿ ಪೋಸ್ಟ್​ ಬರೆದಿದ್ದಾರೆ.

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ವಿಚಾರ: ಎರಡು ದಿನಗಳಲ್ಲಿ ಪರಿಹಾರ ಖಚಿತ ಎಂದ ಸಚಿವ ಸುನೀಲ್​ ಕುಮಾರ್​​

‘ವೇದಿಕೆಯ ಮೇಲೆ ರಾಜ್ಯದ ಮುಖ್ಯಮಂತ್ರಿ, ಒಬ್ಬ ಸಚಿವರು, ಇಬ್ಬರು ಸಂಸದರು ಇದ್ದರು. ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ ಅಭಿಜಾತ ಭಾಷೆ ಕನ್ನಡವನ್ನು 3ನೇ ಸ್ಥಾನಕ್ಕಿಳಿಸಿದ್ದ ಆ ವೇದಿಕೆಯ ಮೇಲೆ ಕೂರಲು ಅವರಿಗೆ ಮನಸಾದರೂ ಹೇಗೆ ಬಂತು? ಈ ಮೂವರ ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ,‘ ಎಂದು ಬರೆದಿದ್ದಾರೆ.

ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ. ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಎಂದು ಬರೆದಿದ್ದಾರೆ.

ರೇಖಾ-ಬಿಗ್ ಬಿ ಹೆಸರು ಕೇಳ್ತಿದ್ದಂತೆ ಅಚ್ಚರಿಗೊಂಡ ಅಮಿತಾಬ್ ಬಚ್ಚನ್ ಹೇಳಿದ್ದೇನು…?

ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಕನ್ನಡವನ್ನು ಕರ್ನಾಟದಿಂದಲೇ ಮೂಲೋತ್ಪಾಟನೆ ಮಾಡಬೇಕು ಎಂಬುದು ಬಿಜೆಪಿಯ ಹಿಡನ್ ಅಜೆಂಡಾವೇ? ಎಂದು ಪ್ರಶ್ನೆ ಮಾಡಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...