alex Certify ಜನವರಿ 5 ರಿಂದ 7 ರವರೆಗೆ ಕನ್ನಡ ಸಾಹಿತ್ಯ ಪರಿಷತ್ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನವರಿ 5 ರಿಂದ 7 ರವರೆಗೆ ಕನ್ನಡ ಸಾಹಿತ್ಯ ಪರಿಷತ್ ಪರೀಕ್ಷೆ : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು :  ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 2023-24ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು ಜನವರಿ 05, 06, 07 ರಂದು  ಒಟ್ಟು 3 ದಿನಗಳ ಕಾಲ ರಾಜ್ಯದ 20 ಕೇಂದ್ರಗಳಲ್ಲಿ ನಡೆಯಲಿದೆ.

 ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ ಹಾಗೂ ಡಿಸೆಂಬರ್ 22ರ ನಂತರವೂ ಪ್ರವೇಶ ಪತ್ರ ತಲುಪದಿರುವ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿ ವಿಚಾರಿಸಬಹುದು ಹಾಗೂ ಪ್ರವೇಶ ಪತ್ರ ಮತ್ತು ಪರೀಕ್ಷಾ ಕೇಂದ್ರಗಳ ವಿಳಾಸವನ್ನು  ಅಂತರ್ಜಾಲ www.kasapa.in ಮೂಲಕ  ಪಡೆಯಬಹುದು.

 ಹೆಚ್ಚಿನ ಮಾಹಿತಿಗಾಗಿ ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ: 080-26612991, 26623584, 26523867 ಹಾಗೂ 8618296186 ಗೆ ಸಂಪರ್ಕಿಸಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...