ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ನೀಡುವ 2023 ನೇ ಸಾಲಿನ ‘ಕೆಂಗಲ್ ಹನುಮಂತಯ್ಯ ಪ್ರಶಸ್ತಿ’ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿ ಆಯ್ಕೆ ಸಮಿತಿಯ ಸಭೆಯಲ್ಲಿ ಯಡಿಯೂರಪ್ಪ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ, ಮೂರು ಬಾರಿ ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿರುವ ಯಡಿಯೂರಪ್ಪ ಅವರು ಕನ್ನಡ ಮತ್ತು ಸಂಸ್ಕೃತಿಗೆ ಕೊಡುಗೆಗಳನ್ನು ನೀಡಿದ್ದಾರೆ. ಅವರಿಗಿರುವ ಕನ್ನಡದ ಬಗೆಗಿನ ಕಾಳಜಿ ಮತ್ತು ಸಾಂಸ್ಕೃತಿಕ ಕೊಡುಗೆಯನ್ನು ಗಮನಿಸಿ ಕೆಂಗಲ್ ಹನುಮಂತಯ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮಹೇಶ್ ಜೋಶಿ ತಿಳಿಸಿದ್ದಾರೆ.