ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಗರಿ ಮಂಡ್ಯ ಜಿಲ್ಲೆ ಸಿದ್ಧವಾಗುತ್ತಿರುವ ಹೊತ್ತಲ್ಲೇ ಕನ್ನಡ ಸಾಹಿತ್ಯ ಪರಿಷತ್ತು ಎಡವಟ್ಟೊಂದನ್ನು ಮಾಡಿದೆ. ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಕೊಲೆ ಆರೋಪಿಯನ್ನು ಆಯ್ಕೆ ಮಾಡಿದ್ದು, ವಿವಾದಕ್ಕೆ ಕಾರಣವಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರನ್ನಾಗಿ ಎಂ.ಬಿ.ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಎಂ.ಬಿ.ಕುಮಾರ್ ವಿರುದ್ಧ ಕೊಲೆ ಆರೋಪವಿದೆ. ರೌಡಿಶೀಟರ್ ದೀಪು ಎಂಬಾತನ ಕೊಲೆ ಕೇಸ್ ನ 24ನೇ ಆರೋಪಿಯಾಗಿದ್ದಾರೆ. 2015ರ ಜು.3ರಂದು ರೌಡಿ ಶೀಟರ್ ದೀಪುನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಎಂ.ಬಿ.ಕುಮಾರ್ ಭಾಗಿಯಾಗಿದ್ದು, ಈ ಬಗ್ಗೆ ಗೊತ್ತಿದ್ದರೂ ಕೊಲೆ ಆರೋಪಿಯೊಬ್ಬನನ್ನು ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ, ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರ ಆಯ್ಕೆ ವಿಚಾರವಗೈ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.